ಮಾರ್ಚ್ 31 ರಿಂದ 16ನೇ ಆವೃತ್ತಿಯ ಐಪಿಎಲ್ ಆರಂಭವಾಗುತ್ತಿದ್ದು, ಮಾಜಿ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಹಾಲಿ ಚಾಂಪಿಯನ್ಸ್ ಗುಜರಾತ್ ಟೈಟಾನ್ಸ್ ತಂಡಗಳು ಉದ್ಘಾಟನಾ ಪಂದ್ಯದಲ್ಲಿ ಸೆಣಸಲಿವೆ.
ಈಗಾಗಲೇ ಫ್ರಾಂಚೈಸಿಗಳು ತಮ್ಮ ತವರಿನಲ್ಲಿ ಅಭ್ಯಾಸ ಆರಂಭಿಸಿವೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ಅಭ್ಯಾಸ ಆರಂಭಿಸಿದೆ.