ಕೇಂದ್ರ ಚುನಾವಣಾ ಆಯೋಗ ಇಂದು(ಮಾರ್ಚ್ 29) ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದು, ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಿದೆ. ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಇಂದು ಬೆಳಗ್ಗೆ 11.30ಕ್ಕೆ ನವದೆಹಲಿಯ ವಿಜ್ಞಾನ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದು, ಕರ್ನಾಟಕದ 224 ವಿಧಾನಸಭಾ ಕ್ಷೇತ್ರಗಳಿಗೆ ಮತದಾನದ ದಿನಾಂಕ, ಫಲಿತಾಂಶದ ಡೇಟ್ ಜೊತೆಗೆ ನೀತಿ ಸಂಹಿತೆ ಬಗ್ಗೆ ವಿವರಣೆ ನೀಡಲಿದ್ದಾರೆ.















































