ನನ್ನ ರಕ್ತದಲ್ಲಿ ಬರೆದುಕೊಡ್ತೇನೆ. ಯಾವ ಕಾರಣಕ್ಕೂ ಶೆಟ್ಟರ್ (Jagadish Shettar) ಈ ಕ್ಷೇತ್ರದಿಂದ ಗೆಲ್ಲಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ( BS Yediyurappa) ಬಹಿರಂಗವಾಗಿ ಘೋಷಣೆ ಮಾಡಿದ್ದಾರೆ. ಲಿಂಗಾಯತ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಚುನಾವಣಾ (Election) ದಿನಾಂಕ ನಿಶ್ಚಯ ಆಗಿದೆ. ಅಭ್ಯರ್ಥಿಗಳೂ ನಿಶ್ಚಯವಾಗಿದ್ದಾರೆ. ಜಗದೀಶ್ ಶೆಟ್ಟರ್ ನಡೆ ಬಗ್ಗೆ ಸತ್ಯ ಸಂಗತಿ ಹೇಳಲು ವೀರಶೈವ ಸಭೆ ಕರೆದಿದ್ದೇನೆ. ಶೆಟ್ಟರ್ ಅನ್ನು ಸಿಎಂ,
ವಿರೋಧ ಪಕ್ಷದ ನಾಯಕ, ರಾಜ್ಯಾಧ್ಯಕ್ಷನನ್ನಾಗಿ ಮಾಡಿದ್ದೇವೆ. ಬಿ.ಬಿ.ಶಿವಪ್ಪ ಅವರನ್ನು ಬಿಟ್ಟು ಶೆಟ್ಟರ್ ಪರವಾಗಿ ನಿಂತು ವಿರೋಧ ಪಕ್ಷದ ನಾಯಕನನ್ನಾಗಿ ಮಾಡಿದ್ದೆವು. ಅವರಿಗೆ ಏನು ಅನ್ಯಾಯ ಮಾಡಿದ್ದೆವು? ಸ್ವತಃ ಪ್ರಧಾನಿಗಳೇ ಮಾತನಾಡಿದರು. ನಿಮ್ಮ ಶ್ರೀಮತಿಯವರನ್ನು ನಿಲ್ಲಿಸಿ, ಅವರಿಗೆ ಟಿಕೆಟ್ ಕೊಡ್ತೇವೆ ಅಂದರು. ಜೊತೆಗೆ ರಾಜ್ಯಸಭಾ ಸದಸ್ಯರಾಗಿ, ಕೇಂದ್ರ ಮಂತ್ರಿ ಆಗುವಂತೆ ಆಫರ್ ನೀಡಲಾಯಿತು ಎಂದರು.














































