ಪಿಯುಸಿ ಓದುತ್ತಿದ್ದ ಮೂವರು ವಿದ್ಯಾರ್ಥಿಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ (Chitradurga) ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ನಂದನಹೊಸೂರು ಗ್ರಾಮದಲ್ಲಿ ನಡೆದಿದೆ.
ಸಂಜೆ ಗ್ರಾಮದ ಹೊರವಲಯದಲ್ಲಿರುವ ಗುಂಡಿಕೆರೆಯಲ್ಲಿ ಗಿರೀಶ್, ಸಂಜಯ್ ಹಾಗೂ ಮನು ಎಂಬ ಮೂವರು ಈಜಲು ತೆರಳಿದ್ರು. ಸಂಜೆಯಾದರೂ ಮನೆಗೆ ಬಾರದೇ ಇದ್ದಾಗ ಕೆರೆಗೆ ಹೋಗಿ ನೋಡಿದಾಗ ಶವ ಪತ್ತೆಯಾಗಿದೆ.













































