ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಬೆಂಗಳೂರಿನ ಹೈಕೋರ್ಟ್ ಪೀಠವು ತೀರ್ಪು ಕಾಯ್ದಿರಿಸಿದೆ. ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಏಕಸದಸ್ಯ ನ್ಯಾಯಪೀಠ ತೀರ್ಪೂ ಕಾಯ್ದಿರಿಸಿ ಆದೇಶಿದೆ. ಅರ್ಜಿದಾರ ಶಿವಕುಮಾರ್ ಪರ ವಾದ ಮಂಡಿಸಿದ ವಕೀಲರು, ಪ್ರಕರಣವನ್ನು ದಾಖಲಿಸಿರುವ ಹಿಂದೆ ರಾಜಕೀಯ ಪಿತೂರಿ ಅಡಗಿದೆ. ಈಗಾಗಲೇ ಆದಾಯ ತೆರಿಗೆಗೆ ಸಂಬಂಧಿಸಿದ ಮೂರು ಪ್ರಕರಣಗಳಲ್ಲಿ ಶಿವಕುಮಾರ್ ಅವರ ಪರವಾಗಿವೆ. ಇದು ನಾಲ್ಕನೇ ಎಫ್ಐಆರ್. ಜನಪ್ರತಿನಿಧಿಗಳ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ದಾಖಲಿಸುವ ಮುನ್ನ ವಿಧಾನಸಭಾಧ್ಯಕ್ಷರ ಅನುಮತಿ ಪಡೆಯಬೇಕಿತ್ತು. ಅಂತೆಯೇ, ತನಿಖೆಗೆ ನೀಡಲಾಗಿರುವ ಆಡಳಿತಾತ್ಮಕ ನಿರ್ಧಾರಕ್ಕೆ ಸಕಾರಣವೂ ಇಲ್ಲ. ಹೀಗಾಗಿ, ತನಿಖೆಗೆ ಶಿಫಾರಸು ಮಾಡಲಾದ ಕ್ರಮ ರದ್ದುಗೊಳಿಸಬೇಕು ಎಂದು ಮನವಿ ಮಾಡಿದರು. ವಾದ ಪ್ರತಿವಾದ ಆಲಿಸಿದ ನ್ಯಾಯಪೀಠ ತೀರ್ಪು ಕಾಯ್ದಿರಿಸಿರುವುದಾಗಿ ಪ್ರಕಟಿಸಿತು.
