ನಾನು ಬಿಜೆಪಿಯಲ್ಲಿದ್ದಿದ್ದರೆ ನಂಬರ್ ಒನ್ ನಾಯಕನಾಗುತ್ತಿದ್ದೆ, ಪ್ರತಿಸ್ಪರ್ಧಿ ಆಗುತ್ತೇನೆ ಎಂಬ ಕಾರಣಕ್ಕೆ ನನ್ನ ವಿರುದ್ಧ ಷಡ್ಯಂತರ ಮಾಡಿದರು ಎಂದು ಮಾಜಿ ಸಿಎಂ, ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್(Jagdish Shetter) ಹೇಳಿದರು. ಲಿಂಗಾಯತ ನಾಯಕತ್ವವಿಲ್ಲದೆ ಸರ್ಕಾರ ರಚಿಸಿದ್ದನ್ನು ತೋರಿಸಬೇಕಿತ್ತು. ಆ ಹಿನ್ನೆಲೆಯಲ್ಲಿ ಇದೆಲ್ಲ ನಡೆಯುತ್ತಿದೆ ಎಂದ ಜಗದೀಶ್ ಶೆಟ್ಟರ್, (Jagdish Shetter)ಶೆಟ್ಟರ್ ನಾಯಕತ್ವ ಕ್ಲೋಸ್ ಮಾಡಲು ಷಡ್ಯಂತ್ರ ನಡೆಯುತ್ತಿತ್ತು.
ಕೆಲವರಿಗೆ ಅಡ್ಡಿ ಆಗುತ್ತೇನೆ ಅಂತಾ ನನ್ನ ವಿರುದ್ಧ ನೆಗೆಟಿವ್ ಪ್ರಚಾರ ನಡೆಸಿದರು. ಕೆಲವರಿಗೆ ಮುಖ್ಯಮಂತ್ರಿ ಆಗಬೇಕು ಅನ್ನೋ ಆಸೆ ಇದೆ. ಬಿ.ಎಲ್.ಸಂತೋಷ್ ವಿರುದ್ಧ ಮಾತನಾಡಿದ್ದಕ್ಕೆ ಇದೆಲ್ಲ ಆಗುತ್ತಿದೆ. ಇಡೀ ದೇಶದಲ್ಲಿ ಬಿ.ಎಲ್.ಸಂತೋಷ್ ವಿರುದ್ಧ ಮಾತಾಡಿದ್ದು ನಾನೇ, ನನಗೆ ಆದ ಅನ್ಯಾಯ ತೇಜಸ್ವಿನಿ ಅನಂತಕುಮಾರ್ಗೂ ಆಗಿದೆ. ತೇಜಸ್ವಿನಿಗೂ ಟಿಕೆಟ್ ಕೈತಪ್ಪಲು ಬಿ.ಎಲ್.ಸಂತೋಷ್ ಕಾರಣ. ಬಿಜೆಪಿಯಲ್ಲಿ ಲಿಂಗಾಯತ ನಾಯಕತ್ವ ಮುಗಿಸುವ ಉದ್ದೇಶವಿತ್ತು ಎಂದರು.















































