ಆಸ್ಟ್ರೇಲಿಯಾ ವಿರುದ್ದ 2023ರ ಐಸಿಸಿ ಟೆಸ್ಟ್ ವಿಶ್ವ ಚಾಂಪಿಯನ್ಷಿಪ್ ಫೈನಲ್ ಪಂದ್ಯಕ್ಕೆ 15 ಸದಸ್ಯರ ಭಾರತ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಮಂಗಳವಾರ ಪ್ರಕಟಿಸಿದೆ. ದೀರ್ಘಾವಧಿ ಭಾರತ ತಂಡದಲ್ಲಿ ಅವಕಾಶ ಕಳೆದುಕೊಂಡಿದ್ದ ಹಿರಿಯ ಬ್ಯಾಟ್ಸ್ಮನ್ ಅಜಿಂಕ್ಯ ರಹಾನೆ ಇದೀಗ ರಾಷ್ಟ್ರೀಯ ತಂಡದಲ್ಲಿ ಅವಕಾಶ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಮತ್ತೊಂದೆಡೆ ಗಾಯದಿಂದ ಗುಣಮುಖರಾಗುತ್ತಿರುವ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಶ್ರೇಯಸ್ ಅಯ್ಯರ್ ಹಾಗೂ ವೇಗಿ ಜಸ್ಪ್ರಿತ್ ಬುಮ್ರಾ ಆಯ್ಕೆಗೆ ಅಲಭ್ಯರಾಗಿದ್ದಾರೆ. ಔಟ್ ಆಫ್ ಫಾರ್ಮ್ ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್ ಹಾಗೂ ಚೈನಾಮನ್ ಸ್ಪಿನ್ನರ್ ಕುಲ್ದೀಪ್ ಯಾದವ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ.














































