ಕಾರು ಅಪಘಾತದಲ್ಲಿ ಗಾಯಗೊಂಡು ಚೇತರಿಸಿಕೊಳ್ಳುತ್ತಿರುವ ಟೀಮ್ ಇಂಡಿಯಾ ವಿಕೆಟ್ ಕೀಪರ್ ರಿಷಭ್ ಪಂತ್, 2023ರ ಇಂಡಿಯನ್ ಪ್ರೀಮಿಯರ್ ಲೀಗ್ ಹಾಗೂ ಎರಡನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ನಿಂದ ಹೊರಗುಳಿದಿದ್ದಾರೆ. ಇದೀಗ ಮುಂಬರುವ ಏಷ್ಯಾ ಕಪ್ ಹಾಗೂ ಏಕದಿನ ವಿಶ್ವಕಪ್ ಟೂರ್ನಿಗಳಿಂದಲೂ ಹೊರಗುಳಿಯಲಿದ್ದಾರೆಂದು ವರದಿಯಾಗಿದೆ.
ಕ್ರಿಕ್ಬಜ್ ಮೂಲಗಳ ಪ್ರಕಾರ ಭಾರತ ತಂಡದ ವಿಕೆಟ್ ಕೀಪರ್ ಹಾಗೂ ಬ್ಯಾಟರ್ ರಿಷಭ್ ಪಂತ್ ಅವರಿಗೆ ಆಗಿರುವ ಗಾಯಗಳಿಂದ ಸಂಪೂರ್ಣವಾಗಿ ಚೇತರಿಸಿಕೊಂಡು ಕ್ರಿಕೆಟ್ ಅಂಗಣಕ್ಕೆ ಮರಳಲು ಇನ್ನೂ 7 ರಿಂದ 8 ತಿಂಗಳು ಬೇಕಾಗಬಹುದು ಎಂದು ಕ್ರಿಕ್ಬಜ್ ವರದಿ ಮಾಡಿದೆ. ಈ ಹಿನ್ನೆಲೆಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ನಾಯಕ 2024ರ ಜನವರಿ ಮೇಲೆ ಸ್ಪರ್ಧಾತ್ಮಕ ಕ್ರಿಕೆಟ್ಗೆ ಮರಳುವ ಸಾಧ್ಯತೆ ಇದೆ.