ತಾಪ್ ಸಿಂಹ ಟ್ವೀಟ್ ಮಾಡಿ, ‘ಪುನೀತ್ ರಾಜ್ ಕುಮಾರ್ ಸರ್ ಹೆಸರಿನಲ್ಲಿ ಬಡವರಿಗಾಗಿ ಆಸ್ಪತ್ರೆ ಕಟ್ಟಿದ ಸೋಮಣ್ಣ. ಮನೆಮೆಚ್ಚಿ ಶ್ಲ್ಯಾಘಿಸಿದ ರಾಘಣ್ಣ, ಸಿದ್ರಾಮಣ್ಣ ಪರವಾಗಿ ಪ್ರಚಾರಕ್ಕೆ ಇಳಿದ ಶಿವಣ್ಣ. ಅವರವರ ಭಾವ ಭಕುತಿಗೆ’ ಎಂದು ಬರೆದುಕೊಂಡಿದ್ದಾರೆ. ನಟ ಶಿವರಾಜ್ ಕುಮಾರ್ ಕಳೆದ ಎರಡು ಮೂರು ದಿನಗಳಿಂದ ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಮಧು ಬಂಗಾರಪ್ಪ ಪರವಾಗಿ ಸೊರಬದಲ್ಲಿ ಮತಯಾಚನೆ ಮಾಡಿದ್ದಾರೆ.













































