ಯಾರೇ ಅದರೂ ನೀತಿ ಸಂಹಿತೆ ಅನ್ವಯಿಸುತ್ತದೆ ಎಂಬುದು ಮತ್ತೆ ಸಾಬೀತಾಗಿದೆ. ಇದಕ್ಕೆ ಪೂರಕವಾಗಿ ಇವತ್ತು ಶಿವಮೊಗ್ಗಕ್ಕೆ ಬಂದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನವರ ಹೆಲಿಕಾಪ್ಟರ್ನ್ನು ಕೂಡ ಅಧಿಕಾರಿಗಳು ಪರಿಶೀಲನೆ ನಡೆಸಿದ್ರು. ಇವತ್ತು ಅವರು ವಿವಿಧ ಕಾರ್ಯಕ್ರಮ ಮುಗಿಸಿಕೊಂಡು ಶಿವಮೊಗ್ಗಕ್ಕೆ ಹೆಲಿಕಾಪ್ಟರ್ನಲ್ಲಿಬಂದಿಳಿಯುತ್ತಿದಂತೆ , ಚುನಾವಣಾ ನೀತಿ ಸಂಹಿತೆಯ ಪ್ರೋಟೋಕಾಲ್ ಪ್ರಕಾರ, ಅಧಿಕಾರಿಗಳು ತಪಾಸಣೆ ನಡೆಸಿದ್ರು. ಇನ್ನೂ ಈ ವೇಳೆ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮಣ್ ಸವದಿ ಪಕ್ಷ ಬಿಟ್ಟು ಹೋಗಿರುವುದರಿಂದ ಪಕ್ಷಕ್ಕೆ ಯಾವುದೇ ನಷ್ಟವಿಲ್ಲ ಎಂದರು. ಅವರ ಆರೋಪಕ್ಕೆ ಉತ್ತರ ಕೊಡುವ ಅವಶ್ಯಕತೆ ಇಲ್ಲ ಎಂದಿದ್ದಾರೆ.














































